HomeKarnatakaಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದ್ದಾರೆ.

ರಾಜ್ಯದ 58,112 ಬೂತ್ ಗಳಲ್ಲಿ 1680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ವರ್ಚುಯಲ್ ಸಂವಾದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಏಪ್ರಿಲ್ 27ರಂದು ಬೆಳಗ್ಗೆ 9:30ಕ್ಕೆ ಸಂವಾದ ನಡೆಯಲಿದೆ. ಬೂತ್ ಗಳಲ್ಲಿ ಟಿವಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಾದದಲ್ಲಿ ಭಾಗವಹಿಸಲು 24 ಲಕ್ಷ ಕಾರ್ಯಕರ್ತರು ನಮೋ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿಗೆ ಸಂವಾದ ಏರ್ಪಡಿಸಲಾಗಿದೆ. 58 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ಕಾರ್ಯಕರ್ತರು ಸಂವಾದ ವೀಕ್ಷಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಂಚಾಲಕರಾದ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್  ಚಂದ್ರಶೇಖರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular