HomeKarnatakaBIG NEWS: ಮೀಸಲಾತಿ ಪರಿಷ್ಕರಣೆ ಹೆಸರಲ್ಲಿ ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ದ್ರೋಹ; ಡಿ.ಕೆ. ಶಿವಕುಮಾರ್...

BIG NEWS: ಮೀಸಲಾತಿ ಪರಿಷ್ಕರಣೆ ಹೆಸರಲ್ಲಿ ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ದ್ರೋಹ; ಡಿ.ಕೆ. ಶಿವಕುಮಾರ್ ಕಿಡಿ

ಮೈಸೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ವಿಶ್ವಾಸದ್ರೋಹ ಪಾರ್ಟಿ ಎಂಬುದು ಸಾಬೀತಾಗಿದೆ. ಎಲ್ಲಾ ಸಮುದಾಯಕ್ಕೂ ಬಿಜೆಪಿ ಸರ್ಕಾರ ದ್ರೋಹ ಮಾಡಿದೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಮೋಸದಾಟವಾಡಿದೆ. ಮೀಸಲಾತಿ ಪರಿಷ್ಕರಣೆ ಹೆಸರಲ್ಲಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ್ರೋಹ ಮಾಡಿದ್ದಾರೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular