
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಹೇಳಿದರು.
ಬೆಳಿಗ್ಗೆ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರ ನಡೆಸಲಿರುವ ಕಿಚ್ಚ ಸುದೀಪ್, ಬಳಿಕ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಾಯಕೊಂಡನಹಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಪ್ರಚಾರ ನಡೆಸಲಿದ್ದಾರೆ. ಬಳಿಕ ಬಳ್ಳಾರಿಯ ಸಂಡೂರಿನಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

