ಜಾತ್ಯಾತೀತ ಜನತಾದಳದ ಭದ್ರಕೋಟೆ ಎಂದೇ ಪರಿಗಣಿಸಲ್ಪಡುವ ಮಂಡ್ಯ ಜಿಲ್ಲೆಗೆ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.
ಬೃಹತ್ ರೋಡ್ ಶೋ ನಡೆಯಲಿದ್ದು, ಯೋಗಿ ಆದಿತ್ಯನಾಥ್ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮೈಸೂರಿಗೆ ಬಂದಿಳಿದಿರುವ ಯೋಗಿ ಆದಿತ್ಯನಾಥ್ ಇನ್ನು ಕೆಲ ಹೊತ್ತಿನಲ್ಲೇ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಯೋಗಿ ಆದಿತ್ಯನಾಥ್ ಅವರಿಗೆ ಎನ್ ಎಸ್ ಜಿ ಭದ್ರತೆ ಇರುವ ಕಾರಣ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯೋಗಿ ಆದಿತ್ಯನಾಥ್ ಅವರೊಂದಿಗೆ ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.