ಬೆಳಗಾವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿದ್ದು, ಇಬ್ಬರೂ ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ. ಲಿಂಗಾಯಿತ ಸಮರದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಸಿಎಂ ಹಾಗೂ ಸಿದ್ದರಾಮಯ್ಯ ಮುಖಾಮುಖಿ ಭೇಟಿಯಾಗಿದ್ದು, ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ಸಿಎಂ ಬೊಮ್ಮಾಯಿ ಅವರಿಗೆ ಬೆನ್ನು ತಟ್ಟಿದ್ದಾರೆ.
ಕೆಲ ಕ್ಷಣ ಇಬ್ಬರು ನಗು ನಗುತ್ತಲೇ ಮಾತನಾಡುತ್ತಾ, ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದ್ದು ವಿಶೇಷವಾಗಿತ್ತು.