BIG NEWS: ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಕೆಲಸ ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಹಾಸಂವಾದ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದು, ಚುನಾವಣೆಯಲ್ಲಿ ಗೆಲ್ಲಲು ಯಾವೆಲ್ಲ ರೀತಿಯ ತಂತ್ರಗಾರಿಕೆ ಅನುಸರಿಸಬೇಕು ಎಂಬ ಬಗ್ಗೆ ಕಿವಿಮಾತು ಹೇಳಿದ್ದಾರೆ.

ಪ್ರತಿಯೊಬ್ಬ ಕಾರ್ಯಕರ್ತರೂ ಬೂತ್ ಮಟ್ಟದಲ್ಲಿ ಕೆಲಸ ಮಾಡಿ. ಬೂತ್ ಮಟ್ಟದಲ್ಲಿ ಗೆದ್ದರೆ ಚುನಾವಣೆಯಲ್ಲಿ ಗೆಲುವು ಸುಲಭ. ಕರ್ನಾಟಕದಲ್ಲಿ ತಳಮಟ್ಟದ ಕಾರ್ಯಕರ್ತರ ಪಡೆ ಇದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಪ್ರತಿ ಕುಟುಂಬದ ಜೊತೆ ಸಂವಾದಗಳನ್ನು ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ತಿಳಿಸಿ ಎಂದು ಸೂಚಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಯಾವೆಲ್ಲ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅಭಿವೃದ್ಧಿ ಕೆಲಸಗಳು ಹೇಗೆ ವೇಗವಾಗಿ ಸಾಗುತ್ತಿವೆ ಎಂಬುದನ್ನು ಮನದಟ್ಟು ಮಾಡಿಕೊಡಿ. ಸ್ಥಳೀಯ ಮಟ್ಟದಲ್ಲಿ ಯುವ ಕಾರ್ಯಕರ್ತರು ಕೆಲಸ ಮಾಡಬೇಕು. ಈ ಬಾರಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ದಾಖಲೆಯ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read