HomeKarnatakaBIG NEWS: ಕಾಂಗ್ರೆಸ್ ನ ವ್ಯಾರಂಟಿಯೇ ಎಕ್ಸ್ ಪೈರ್ ಆಗಿದೆ; ಈಗ ಗ್ಯಾರಂಟಿ ಕೊಡುವ ಬಗ್ಗೆ...

BIG NEWS: ಕಾಂಗ್ರೆಸ್ ನ ವ್ಯಾರಂಟಿಯೇ ಎಕ್ಸ್ ಪೈರ್ ಆಗಿದೆ; ಈಗ ಗ್ಯಾರಂಟಿ ಕೊಡುವ ಬಗ್ಗೆ ಯೋಜನೆ ಘೋಷಿಸಿದೆ; ವ್ಯಂಗ್ಯವಾಡಿದ ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿಗಳನ್ನು ಕೊಡುತ್ತಿದ್ದಾರೆ. ಯಾರೂ ಕೂಡ ಅದಕ್ಕೆ ಬಲಿಯಾಗಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ವ್ಯಾರಂಟಿಯೇ ಎಕ್ಸ್ ಪೈರ್ ಆಗಿದೆ. ಈಗ ಗ್ಯಾರಂಟಿ ಕೊಡುವುದರ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ. ಯಾರೂ ಈ ಸುಳ್ಳು ಗ್ಯಾರಂಟಿಯನ್ನು ನಂಬಬೇಡಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಯುವ ಪೀಳಿಗೆಯ ಭವಿಷ್ಯದ ಬಗ್ಗೆ ಯೋಚಿಸಬೇಕಿದೆ. ಅದಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ಅಭಿವೃದ್ಧಿಗಾಗಿ ಬಿಜೆಪಿ ಸದಾ ಶ್ರಮಿಸುತ್ತದೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಬದಲಾವಣೆ ಸಾಧ್ಯ. ಇದನ್ನು ಬಿಜೆಪಿ ಕಾರ್ಯಕರ್ತರು ಪ್ರತಿಯೊಬ್ಬರಿಗೂ ಮನದಟ್ಟು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular