
ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಶ್ರೀನಿವಾಸಗಾರ್ಡನ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಪ್ರಕಾಶ್ ಕ್ಯಾರಟ್ಟಿ ಹಾಗೂ ಬೆಂಬಲಿಗರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

