HomeKarnatakaBIG NEWS: ಸಂಸದೆ ಸುಮಲತಾ ಹೇಳಿಕೆಗೆ ಮಾಜಿ ಸಿಎಂ. HDK ಹೇಳಿದ್ದೇನು.....?

BIG NEWS: ಸಂಸದೆ ಸುಮಲತಾ ಹೇಳಿಕೆಗೆ ಮಾಜಿ ಸಿಎಂ. HDK ಹೇಳಿದ್ದೇನು…..?

ಬೆಂಗಳೂರು: ಯಾರೋ ಒಬ್ಬರು ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರಲಿ, ಆಗ ನಾನೇ ಸಿಎಂ ಆಗಬಹುದು ಎಂದು ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ನಡೆಸಿದ್ದ ವಾಗ್ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಲಿ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ, ಸುಮಲತಾ ಅವರೇ ಜೆಡಿಎಸ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ? ಎಂದರು.

ನಿನ್ನೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ್ದ ಸಂಸದೆ ಸುಮಲತಾ, ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular