HomeKarnatakaBIG NEWS: ಜೆಡಿಎಸ್‌ ಗೆ ಬಿಗ್ ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಗೀತಾ ಶಿವರಾಜ್ ಕುಮಾರ್

BIG NEWS: ಜೆಡಿಎಸ್‌ ಗೆ ಬಿಗ್ ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನ ಕಚೇರಿಯಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಈಗಾಗಲೇ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರದಲ್ಲಿಯೂ ಭಾಗಿಯಾಗಿದ್ದಾರೆ. ಇದೀಗ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular