HomeKarnatakaBIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಲಿಂಗಾಯಿತರಿಗೆ ಬಿಜೆಪಿಯಿಂದ ಅವಮಾನವಾಗಿದೆ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಕಣ್ಣೀರು ಹಾಕಿಸಿದ್ರು ಎಂಬ ಕಾಂಗ್ರೆಸ್ ಆರೋಪ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ. ಬೇರೆಯವರಿಗೆ ಅವಕಾಶ ಸಿಗಲಿ ಎಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದರು.

ಬಿಜೆಪಿ ಯಾರಿಗೂ ಅವಮಾನ ಮಾಡಿಲ್ಲ, ಎಲ್ಲರಿಗೂ ಉತ್ತಮ ಸ್ಥಾನಮಾನ ನೀಡಿ ಒಳ್ಳೆಯ ರೀತಿ ನಡೆಸಿಕೊಂಡಿದೆ. ಕಾಂಗ್ರೆಸ್ ನವರು ರಾಜಕೀಯ ದುರುದ್ದೇಶಕ್ಕೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular