alex Certify ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಷಪೂರಿತ ಹಾವು’ ಎಂದು ಟೀಕಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿರುವ ಖರ್ಗೆ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಪ್ರಧಾನಿ ಮೋದಿ ಅವರು ವಿಷಪೂರಿತ ಹಾವಿನಂತೆ, ಇದು ವಿಷವೋ ಅಲ್ಲವೋ ಎಂದು ನೀವು ಭಾವಿಸಬಹುದು. ನೀವು ಅದನ್ನು ನೆಕ್ಕಿದರೆ ನೀವು ಸಾಯುತ್ತೀರಿ ಎಂದು ಖರ್ಗೆ ಹೇಳಿದ್ದರು.

ನಂತರದಲ್ಲಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ತಮ್ಮ ಹೇಳಿಕೆ ಪ್ರಧಾನಿ ಮೋದಿಯನ್ನು ಉದ್ದೇಶಿಸಿಲ್ಲ. ಬಿಜೆಪಿಯ ಸಿದ್ಧಾಂತವು “ಹಾವಿನಂತೆ” ಎಂದು ಹೇಳಿದ್ದೇನೆ. ನಾನು ಪ್ರಧಾನಿ ಮೋದಿಯವರಿಗಾಗಿ ಇದನ್ನು ವೈಯಕ್ತಿಕವಾಗಿ ಹೇಳಿಲ್ಲ, ಅವರ(ಬಿಜೆಪಿ) ಸಿದ್ಧಾಂತವು ಹಾವಿನಂತಿದೆ. ನೀವು ಅದನ್ನು ಮುಟ್ಟಲು ಪ್ರಯತ್ನಿಸಿದರೆ ನಿಮ್ಮ ಸಾವು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಷವು ಅವರ ಮನಸ್ಸಿನಲ್ಲಿದೆ ಎಂದು ಹೇಳಿದ್ದಾರೆ.

ಖರ್ಗೆ ಅವರ ಮನಸ್ಸಿನಲ್ಲಿ ವಿಷವಿದೆ, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿ ಬಗ್ಗೆ ಪೂರ್ವಾಗ್ರಹ ಪೀಡಿತ ಮನಸ್ಸು, ರಾಜಕೀಯವಾಗಿ ಅವರ ವಿರುದ್ಧ ಹೋರಾಡಲು ಸಾಧ್ಯವಾಗದ ಕಾರಣ ಹತಾಶೆಯಿಂದ ಈ ರೀತಿಯ ಆಲೋಚನೆ ಬರುತ್ತದೆ. ಅವರ ಹಡಗು ಮುಳುಗುತ್ತಿದೆ, ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಖರ್ಗೆ ಅವರ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಆಕ್ಷೇಪಿಸಿದ್ದು, ಕಾಂಗ್ರೆಸ್ ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೋದಿ ಕುರಿತಾಗಿ ಹೇಳಿದ್ದ “ಮೌತ್ ಕಾ ಸೌದಾಗರ್” ಹೇಳಿಕೆಯನ್ನು ಉಲ್ಲೇಖಿಸಿ ಅವರು ಕಾಂಗ್ರೆಸ್ ಮುಖ್ಯಸ್ಥರ ಹೇಳಿಕೆಯು ಸೋನಿಯಾ ಗಾಂಧಿಯವರು ನೀಡಿದ್ದಕ್ಕಿಂತ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ಮೋದಿಯವರ ಕುರಿತಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಖರ್ಗೆ ಅವರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಇಂತಹ ಪದಗಳನ್ನು ಬಳಸಿದ್ದಾರೆ ಎಂದು ಟೀಕಿಸಿದ್ದಾರೆ.

ಖರ್ಗೆಯವರ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ಅಧ್ಯಕ್ಷರು, ಅವರು ಜಗತ್ತಿಗೆ ಏನು ಹೇಳಲು ಬಯಸುತ್ತಾರೆ? ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಪ್ರಧಾನಿ ಮತ್ತು ಇಡೀ ಜಗತ್ತು ಅವರನ್ನು ಗೌರವಿಸುತ್ತದೆ. ಇಂತಹ ಪ್ರಧಾನಿಯವರ ಬಗ್ಗೆ ಇಂತಹ ಭಾಷೆಯನ್ನು ಬಳಸುವುದು ಕಾಂಗ್ರೆಸ್ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ. ಅವರು(ಖರ್ಗೆ) ದೇಶದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...