HomeKarnatakaBREAKING: ಹೈವೋಲ್ಟೇಜ್ ವರುಣಾ ಕ್ಷೇತ್ರದ ಸಿದ್ಧರಾಮಯ್ಯ ಹುಟ್ಟೂರಿನಲ್ಲಿ ಕಾಂಗ್ರೆಸ್ –ಬಿಜೆಪಿ ಗಲಾಟೆ: ಸ್ವಲ್ಪದರಲ್ಲೇ ಪಾರಾದ ಸೋಮಣ್ಣ,...

BREAKING: ಹೈವೋಲ್ಟೇಜ್ ವರುಣಾ ಕ್ಷೇತ್ರದ ಸಿದ್ಧರಾಮಯ್ಯ ಹುಟ್ಟೂರಿನಲ್ಲಿ ಕಾಂಗ್ರೆಸ್ –ಬಿಜೆಪಿ ಗಲಾಟೆ: ಸ್ವಲ್ಪದರಲ್ಲೇ ಪಾರಾದ ಸೋಮಣ್ಣ, ಪ್ರತಾಪ್ ಸಿಂಹ

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದ ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಸಿದ್ದರಾಮಯ್ಯನವರ ಅಣ್ಣನ ಮನೆಯ ಬಳಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸ್ವಲ್ಪದರಲ್ಲೇ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ ಮತ್ತು ಸಂಸದ ಪ್ರತಾಪ ಸಿಂಹ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular