ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ.
ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 24ರಂದು ಅಧಿ ಸೂಚನೆ ಹೊರಡಿಸಿದ್ದು, ಇದರ ಪ್ರಕಾರ ಅರ್ಜಿ ಆಹ್ವಾನಿಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಅರ್ಜಿ ಆಹ್ವಾನಿಸುವುದು ಮತ್ತಷ್ಟು ವಿಳಂಬವಾಗಲಿದೆ. ಮೊದಲ ವೇಳಾಪಟ್ಟಿ ಪ್ರಕಾರ, ಏಪ್ರಿಲ್ 17ರಂದು ಅರ್ಜಿ ಆಹ್ವಾನಿಸಬೇಕಿತ್ತು. ತಾಂತ್ರಿಕ ತೊಂದರೆಯಿಂದಾಗಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಮತ್ತಷ್ಟು ವಿಳಂಬವಾಗಲಿದ್ದು, ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.