ಸೋಷಿಯಲ್ ಮೀಡಿಯಾದಲ್ಲಿ ಪರಿಚಯ; ಬಾಲಕಿ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರಿಂದ ಅತ್ಯಾಚಾರ

ಮಹಾರಾಷ್ಟ್ರದ ಥಾಣೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಆರೋಪಿಗಳಲ್ಲಿ ಸಾಹಿಲ್ ರಾಜ್‌ಭರ್ (18), ಸುಜಲ್ ಗವತಿ (20), ವಿಜಯ್ ಬೇರಾ (21) ಮತ್ತು ಓರ್ವ ಅಪ್ರಾಪ್ತ ಸೇರಿದ್ದಾರೆ. ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಥಾಣೆಯ ಕೋಲ್ಸೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ಸಂತ್ರಸ್ತೆಯ ಕುಟುಂಬ ಸದಸ್ಯರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ, ಪೊಲೀಸರ ಹುಡುಕಾಟ ಆರಂಭಿಸಿದ್ದರು. ಬಾಲಕಿ ಎರಡು ದಿನಗಳ ನಂತರ ತನ್ನ ಮನೆಗೆ ಮರಳಿ ತನ್ನ ಮೇಲಾದ ಸಾಮೂಹಿಕ ಅತ್ಯಾಚಾರದ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಉಲ್ಲಾಸನಗರ ನಿವಾಸಿಯಾಗಿರುವ ಆರೋಪಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂತ್ರಸ್ತ ಬಾಲಕಿ ಪರಿಚಯ ಮಾಡಿಕೊಂಡಿದ್ದಳು. ತನ್ನ ಗೆಳತಿ ನಮ್ಮಿಬ್ಬರ ಬಗ್ಗೆ ತಪ್ಪು ತಿಳಿದಿದ್ದಾಳೆ. ನೀನು ಬಂದು ಸಮಸ್ಯೆ ಬಗೆಹರಿಸು ಎಂದು ಆರೋಪಿ ಸಂತ್ರಸ್ತೆಯ ಮನವೊಲಿಸಿ ತನ್ನ ಮನೆಗೆ ಬರುವಂತೆ ಕೇಳಿಕೊಂಡಿದ್ದಾನೆ.

ಸಂತ್ರಸ್ತೆ ಆರೋಪಿಯ ಮನೆಗೆ ಬಂದಾಗ, ಅವನು ಅವಳನ್ನು ತನ್ನ ಸ್ನೇಹಿತನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ತನ್ನ ಇತರ ಮೂವರು ಸ್ನೇಹಿತರನ್ನು ಕರೆದು ಮರುದಿನವೂ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ದೂರನ್ನು ಸ್ವೀಕರಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಡಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read