HomeKarnatakaBIG NEWS: ಕಾಂಗ್ರೆಸ್ ಗ್ಯಾರಂಟಿ ಕುರಿತು ಮೋದಿ ಹತಾಶ ಹೇಳಿಕೆ; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಕಾಂಗ್ರೆಸ್ ಗ್ಯಾರಂಟಿ ಕುರಿತು ಮೋದಿ ಹತಾಶ ಹೇಳಿಕೆ; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಗುರುವಾರದಂದು ಬಿಜೆಪಿಯ 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನವರು ನೀಡುತ್ತಿರುವ ಗ್ಯಾರಂಟಿ ಕುರಿತು ವ್ಯಂಗ್ಯವಾಡಿದ್ದರು.

ಕಾಂಗ್ರೆಸ್ ಗ್ಯಾರಂಟಿ ಎಂದರೆ ಅದು ಭ್ರಷ್ಟಾಚಾರ, ಕಾಂಗ್ರೆಸ್ ಗ್ಯಾರಂಟಿ ಎಂದರೆ ಅದು ಸುಳ್ಳು ಆಶ್ವಾಸನೆ ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಇದಕ್ಕೆ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲುವ ಹತಾಶೆಯಿಂದ ಮೋದಿ ಇಂತಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಹದಿನೈದು ಲಕ್ಷ ನೀಡುತ್ತೇನೆ ಎಂದಿದ್ದರು ಎಲ್ಲಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಬಿಜೆಪಿ ಆಡಳಿತ ನಡೆಸಿದ್ದು ಎಷ್ಟು ಭ್ರಷ್ಟಾಚಾರ ನಡೆದಿದೆ ಎಂಬುದು ಪ್ರಧಾನಿಗೆ ತಿಳಿದಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular