HomeKarnatakaBIG NEWS: ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ ಗೀತಾ ಶಿವರಾಜ್ ಕುಮಾರ್

BIG NEWS: ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ ಗೀತಾ ಶಿವರಾಜ್ ಕುಮಾರ್

ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ಡಿ. ಕೆ. ಶಿವಕುಮಾರ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಶಾಲು ಹೊದಿಸಿ ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ವೇಳೆ ಗೀತಾ ಶಿವರಾಜ್ ಕುಮಾರ್ ಅವರ ಸೋದರ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ, ಸಲೀಂ ಅಹ್ಮದ್, ಸಾಧು ಕೋಕಿಲ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷಕ್ಕೆ ಬರಮಾಡಿಕೊಂಡ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು ಗೀತಾ ಶಿವರಾಜ್ ಕುಮಾರ್ ಅವರನ್ನು ಪಕ್ಷಕ್ಕೆ ತರೆತರಲು ಹಲವು ಬಾರಿ ಪ್ರಯತ್ನಿಸಿ ಸೋತಿದ್ದೆ. ಆದರೆ ಈ ಬಾರಿ ಕರೆತಂದಿದ್ದೀವಿ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular