ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಆದೇಶವೊಂದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ದ್ವೇಷದ ಭಾಷಣಗಳನ್ನು “ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಗಂಭೀರ ಅಪರಾಧ” ಎಂದು ಬಣ್ಣಿಸಿದೆ.
ಸುಪ್ರೀಂ ಕೋರ್ಟ್ ಪೀಠವು ತನ್ನ ಅಕ್ಟೋಬರ್ 21, 2022 ರ ಆದೇಶವನ್ನು ಉಲ್ಲೇಖಿಸಿ, ದ್ವೇಷದ ಭಾಷಣದ ವೇಳೆ ಪ್ರಕರಣಗಳನ್ನು ದಾಖಲಿಸುವಲ್ಲಿ ಯಾವುದೇ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ.