alex Certify BREAKING: ಕಾರಿನ ಡೋರ್ ಬಳಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರಿನ ಡೋರ್ ಬಳಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ಸಿದ್ದರಾಮಯ್ಯ

ವಿಜಯನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಬಿಸಿಲ ಝಳದ ನದುವೆಯೇ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ.

ಕೂಡ್ಲಗಿ ಹೆಲಿ ಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕಾಪ್ಟರ್ ನಿಂದ ಇಳಿದು ಜನರತ್ತ ಕೈ ಬೀಸುತ್ತಾ ಸಾಗಿ ಕಾರಿನ ಡೋರ್ ಮೇಲೆ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ತಕ್ಷಣ ಸಿದ್ದರಾಮಯ್ಯನವರನ್ನು ಬೀಳದಂತೆ ಹಿಡುದುಕೊಂಡಿದ್ದಾರೆ. ಬಳಿಕ ಸಿದ್ದರಾಮಯ್ಯನವರು ಸಾವರಿಸಿಕೊಂಡು ಕಾರಿನಲ್ಲಿ ಕುಳಿತಿದ್ದಾರೆ.

ಸ್ಥಳದಲ್ಲಿದ್ದ ವೈದ್ಯರು ಸಿದ್ದರಾಮಯ್ಯನವರಿಗೆ ಗ್ಲುಕೋಸ್ ನೀಡಿದ್ದಾರೆ. ಕೆಲಕಾಲ ಕಾರಿನಲ್ಲಿಯೇ ಕುಳಿತು ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಸಿದ್ದರಾಮಯ್ಯನವರಿಗೆ ಯಾವುದೇ ಸಮಸ್ಯೆಯಾಗಿಲ್ಲ ಅವರು ಆರೋಗ್ಯವಾಗಿಯೇ ಇದ್ದಾರೆ. ಕಾರಿನ ಡೋರ್ ಬಳಿ ಕುಸಿದು ಬಿದ್ದಿದ್ದಾರೆ ಎಂಬುದು ಸುಳ್ಳು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...