HomeKarnatakaBIG NEWS: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ಸುಳಿವು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್...

BIG NEWS: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ಸುಳಿವು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಿಎಂ HDK ಹೇಳಿದ್ದೇನು?

ಮಂಡ್ಯ: ಕಾಂಗ್ರೆಸ್-ಜೆಡಿಎಸ್ ನ 50 ಮುಖಂಡರ ಮೇಲೆ ಇನ್ನೆರಡು ದಿನಗಳಲ್ಲಿ ಲೋಕಾಯುಕ್ತ ದಾಳಿ ನಡೆಯುವ ಮಾಹಿತಿಯಿದೆ. ಬಿಜೆಪಿ ವಾಮಮಾರ್ಗದ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ. ಈ ಮೂಲಕ ವಿಪಕ್ಷದವರನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂಬ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದ್ವನಿಗೂಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

ಐಟಿ, ಇಡಿ, ಲೋಕಾ ದಾಳಿಯ ಮೂಲಕವಾಗಿ ಬಿಜೆಪಿಯವರು ಕಾಂಗ್ರೆಸ್, ಜೆಡಿಎಸ್ ನಾಯಕರನ್ನು, ಅಭ್ಯರ್ಥಿಗಳನ್ನು ಹೆದರಿಸುತ್ತಿದ್ದಾರೆ. ಬಿಜೆಪಿಯಲ್ಲಿ ಐಟಿ ಮೋರ್ಚಾ, ಇಡಿ ಮೋರ್ಚಾ ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular