ನವದೆಹಲಿ: ‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಮನ್ ಕಿ ಬಾತ್’ 100ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಕೋಟ್ಯಂತರ ಜನರ ಮನ ಗೆದ್ದಿದೆ. 2014ರ ಅಕ್ಟೋಬರ್ 4ರಂದು ಮೊದಲ ‘ಮನ್ ಕಿ ಬಾತ್’ ಪ್ರಸಾರವಾಗಿತ್ತು. ಈ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡಲಾಗಿದೆ. ಪ್ರತಿ ತಿಂಗಳು ಜನರು ಕಳುಹಿಸುತ್ತಿದ್ದ ಸಂದೇಶಗಳನ್ನು ಓದುತ್ತಿದ್ದೆ. ಜನರಿಗೆ ಸಂಬಂಧಿಸಿದ ಸಮಸ್ಯೆಗಳು ಸಾಧನೆಗಳ ಮಾಹಿತಿ ಸಂಗ್ರಹವಾಗಿ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಯಿತು ಎಂದರು.
ಸರ್ಕಾರ ಜಾರಿ ಮಾಡುವ ಯೋಜನೆಗಳ ಬಗ್ಗೆ ಕಾರ್ಯಕ್ರಮದ ಮಾಹಿತಿ ನೀಡಲಾಯಿತು. ಶಿಕ್ಷಣ, ವೈದ್ಯಕೀಯ ಸೌಲಭ್ಯ, ಜಲ ಸಂರಕ್ಷಣೆ, ಸರ್ಕಾರಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಸೇರಿ ಹಲವು ಯೋಜನೆಗಳ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಹೇಳಿದರು.
ಕಾರ್ಯಕ್ರಮದ ಮೂಲಕ ಬೇರೆಯವರಿಂದ ಕಲಿಯಲು ಅನುಕೂಲವಾಗಿದೆ. ‘ಮನ್ ಕಿ ಬಾತ್’ ಕಾರ್ಯಕ್ರಮ ಸಮಾಜಕ್ಕೆ ಪ್ರೇರಣೆಯಾಗಿದೆ. ವೋಕಲ್ ಫಾರ್ ಲೋಕಲ್ ಮತ್ತಷ್ಟು ಗಟ್ಟಿಯಾಗಿದೆ. ಪ್ರತಿ ಎಪಿಸೋಡ್ ನಿಂದ ಹೊಸದನ್ನು ಕಲಿಯಲು ಸಾಧ್ಯವಾಗಿದೆ. ಸ್ವಚ್ಛತಾ ಕಾರ್ಯಕ್ರಮದಿಂದ ಉದ್ಯಮ ಅಭಿವೃದ್ಧಿಗೆ ಸಹಕಾರಿಯಾಗಿದೆ. ಹರಿಯಾಣದಲ್ಲಿ ಲಿಂಗಾನುಪಾತ ಸುಧಾರಣೆಯಾಗಿದೆ ಎಂದು ಮೋದಿ ಹೇಳಿದ್ದಾರೆ.