ಕೋಲಾರ: ಪ್ರಧಾನಿ ನರೇಂದ್ರ ಮೋದಿ ಚಿನ್ನದ ನಾಡು ಕೋಲಾರಕ್ಕೆ ಎಂಟ್ರಿಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಕೋಲಾರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಮಾವೇಶಕ್ಕೆ ಹರಿದು ಬಂದ ಜನಸಾಗರ ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ನಿದ್ದೆ ಕೆಡಿಸಲಿವೆ. ಇದು ಬಿಜೆಪಿ ಸರ್ಕಾರಕ್ಕೆ ನೀವು ನೀಡುತ್ತಿರುವ ಬೆಂಬಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಪಕ್ಷಗಳನ್ನು ರಾಜ್ಯದ ಜನರು ಕ್ಲೀನ್ ಬೋರ್ಡ್ ಮಾಡಲಿದ್ದಾರೆ. ಈ ಬಾರಿಯ ಜನತೆಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಹೇಳಿದರು.
ಈ ಚುನವಾಣೆ ಬರೀ ಶಾಸಕ, ಸಚಿವ, ಸಿಎಂ ಮಾಡಲು ನಡೆಯುವ ಚುನಾವಣೆಯಲ್ಲ. ಮುಂದಿನ 25 ವರ್ಷಗಳ ಕಾಲ ಕರ್ನಾಟಕವನ್ನು ಅಭಿವೃದ್ಧಿ ರಾಜ್ಯ ಮಾಡುವುದಕ್ಕಾಗಿ. ಅಸ್ತಿರ ಸರ್ಕಾರದಿಂದ ನಷ್ಟ ಹೆಚ್ಚು, ಭ್ರಷ್ಟಾಚಾರಗಳು ನಡೆಯುತ್ತವೆ ಹೀಗಾಗಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕಿದೆ ಎಂದು ಹೇಲಿದರು.