ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಳದಿ ಜ್ವರದ ಭೀತಿ ಶುರುವಾಗಿದೆ. ಕೋವಿಡ್, ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಹಳದಿ ಜ್ವರದ ಆತಂಕ ಹೆಚ್ಚಾಗಿದ್ದು, ಈ ರೋಗ ಲಕ್ಷಣ ಕಂಡುಬಂದ 45 ಜನ ಶಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ.
ಆಪರೇಷನ್ ಕಾವೇರಿ ಕಾರ್ಯಾಚರಣೆ ಮೂಲಕ ಸೂಡನ್ ನಿಂದ ಆಗಮಿಸಿರುವ 45 ಜನ ಶಂಕಿತರನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ.
ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕಾ, ಉಗಾಂಡ, ನೈಜೇರಿಯಾ, ಕೀನ್ಯಾ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಯೆಲ್ಲೋ ಫೀವರ್ ವೈರಸ್ ಹೆಚ್ಚಾಗಿದ್ದು, ಇಂತಹ ಹೈ ರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಈ ಹಿನ್ನೆಲೆಯಲಿ ಆಪರೇಷನ್ ಕಾವೇರಿ ಕಾರ್ಯಾಚರಣೆಯಲ್ಲಿ 362 ಜನರು ಬೆಂಗಳೂರಿಗೆ ಆಗಮಿಸಿದ್ದು ಅವರಲ್ಲಿ 45 ಜನರ ಬಳಿ ಯೆಲ್ಲೋ ಫೀವರ್ ವೈರಸ್ ಗೆ ಲಸಿಕೆ ಪಡೆದ ಸರ್ಟಿಫಿಕೇಟ್ ಇಲ್ಲದ ಕಾರಣ ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಮಾಡಲಾಗಿದೆ.
ಹಳದಿ ಕಣ್ಣು, ಕಣ್ಣು ಉರಿ, ಜ್ವರ, ತೀವ್ರ ಸುಸ್ತು, ಮೈ ಕೈ ನೋವು ಹಳದಿ ಜ್ವರದ ಲಕ್ಷಣಗಳಾಗಿವೆ. ದೇಶದಲ್ಲಿ ಪ್ರಸ್ತುತ ಇಂತಹ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಆದರೆ ಮುಂಜಾಗೃತಾ ಕ್ರಮವಾಗಿ ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಲಸಿಕೆ, ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.