ಚಾಮರಾಜನಗರ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಬಿಜೆಪಿ ಮುಖಂಡ ವಿ. ಸೋಮಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಲ್ಲಿಕಾರ್ಜುನ ಸ್ವಾಮಿ ಅಲಿಯಾಸ್ ಆಲೂರು ಮಲ್ಲು ಮತ್ತು ಸೋಮಣ್ಣ ಮತ್ತು ನಡುವೆ ನಡೆದ ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೋಮಣ್ಣ ಅವರು ಸ್ಪರ್ಧೆಯಿಂದ ಹಿಂದೆ ಸರಿಯಲು ಮಲ್ಲಿಕಾರ್ಜುನ ಸ್ವಾಮಿಗೆ 50 ಲಕ್ಷ ರೂಪಾಯಿ ನಗದು ಮತ್ತು ಸರ್ಕಾರಿ ವಾಹನ ನೀಡುವುದಾಗಿ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಚಾಮರಾಜನಗರದ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171 ಇ ಮತ್ತು 171 ಎಫ್, 1860 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.