HomeKarnatakaBIG NEWS: ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೊಸ ಗ್ಯಾರಂಟಿ ಯೋಜನೆ ಘೋಷಿಸಿದ ಪ್ರಿಯಾಂಕಾ ಗಾಂಧಿ

BIG NEWS: ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೊಸ ಗ್ಯಾರಂಟಿ ಯೋಜನೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಕೇಂದ್ರ ನಾಯಕರು ಮತ ಬೇಟೆಯಲ್ಲಿ ನಿರತರಾಗಿದ್ದಾರೆ. ಮತದಾರರ ಮನಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಈ ನಡುವೆ ಕಾಂಗ್ರೆಸ್, ಮತ್ತಷ್ಟು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿರುವ ಪ್ರಿಯಾಂಕಾ ಗಾಂಧಿ, ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆ ಘೋಷಿಸಿರುವ ಪ್ರಿಯಾಂಕಾ ಗಾಂಧಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ವೇತನ ಹೆಚ್ಚಳ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ವೇತನ ಏರಿಕೆ ಹಾಗೂ ಮಧ್ಯಾಹ್ನದ ಬಿಸಿಯೂಟ ತಯಾರಕ ಕಾರ್ಯಕರ್ತೆಯರಿಗೆ 5 ಸಾವಿರ ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular