HomeKarnatakaBIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

BIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ.

40 ವರ್ಷದ ಮಲ್ಲಿಕಾರ್ಜುನ ಕುಲಕರ್ಣಿ ಮೃತ ಪಿಎಸ್ಐ. ಮಲ್ಲಿಕಾರ್ಜುನ ಕುಲಕರ್ಣಿ ಚಲಿಸುತ್ತಿದ್ದ ಕಾರು ಕಿರೇಸೂರು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮಲ್ಲಿಕಾರ್ಜುನ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ ಅವರು ಅಮಿನಗಡ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular