HomeKarnatakaBIG NEWS: ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ; ಭ್ರಷ್ಟರ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ;...

BIG NEWS: ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ; ಭ್ರಷ್ಟರ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ಮೋದಿ ಹೇಳಿಕೆಗೆ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ. ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಇವರ ಸರ್ಕಾರದಲ್ಲಿರುವ ಭ್ರಷ್ಟ ಮಂತ್ರಿಗಳ ಬಗ್ಗೆ ದೇಶ, ರಾಜ್ಯ ನೋಡುತ್ತಿದೆ. ಭ್ರಷ್ಟ ಸರ್ಕಾರ, ಮಂತ್ರಿಗಳ ಜೊತೆಯೇ ಮೋದಿ ಇರುವುದು. ಅಂತಹವರಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡಿರುವುದು ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸವದಿ, ಜಗದೀಶ್ ಶೆಟ್ಟರ್ ವಿರುದ್ಧ ಭ್ರಷ್ಟಾಚಾರದ ಆರೋಪ ಇತ್ತಾ? ಆದರೂ ಯಾಕೆ ಟಿಕೆಟ್ ಕೊಡಲಿಲ್ಲ? ಪಕ್ಷದಿಂದ ಹೊರ ಹೋಗುವಂತೆ ಯಾಕೆ ಮಾಡಿದ್ರು? ನಮ್ಮ ಜೊತೆ ಇರುವವರ ಮೇಲೆ ಯಾವುದೇ ಆರೋಪಗಳು ಇಲ್ಲ. ಭ್ರಷ್ಟಾಚಾರ ನಡೆಸಿರುವ ಮಂತ್ರಿಗಳ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ ನಡೆಸಿ, ಪ್ರಚಾರ ನಡೆಸುತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular