ಬೆಂಗಳೂರು: ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹೊಡೆದಾಟ ನಡೆದಿದೆ.
ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಬೆಂಬಲಿಗರು ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಬೊಮ್ಮನಹಳ್ಳಿಯ ಡಿಎಸ್ಎಸ್ ಕಚೇರಿಯಲ್ಲಿ ಸೀರೆ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಡಿಎಸ್ಎಸ್ ಕಚೇರಿ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸತೀಶ ರೆಡ್ಡಿ ಫೋಟೋ ಇರುವ 50 ಸೀರೆ ಜಪ್ತಿ ಮಾಡಲಾಗಿದೆ.
ಈ ವೇಳೆ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.