ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಕ್ಷೇತ್ರಗಳಲ್ಲಿ ಕಳೆದ ವಾರದಿಂದ ಭರ್ಜರಿ ಪ್ರಚಾರ ನಡೆಸಿರುವ ನಟ ಕಿಚ್ಚ ಸುದೀಪ್ ಇಂದು ಕೂಡ ಬೆಳಗಾವಿ ಜಿಲ್ಲೆಯ ವಿವಿಧೆಡೆ ಪ್ರಚಾರ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವರು. ಕಿತ್ತೂರು, ಬೆಳಗಾವಿ ಗ್ರಾಮಾಂತರ, ಯಮಕನಮರಡಿ, ಚಿಕ್ಕೋಡಿ ಸೇರಿದಂತೆ ಐದಾರು ಕ್ಷೇತ್ರಗಳಲ್ಲಿ ಸುದೀಪ್ ಪ್ರಚಾರ ನಡೆಸಲಿದ್ದಾರೆ.
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಇಂದು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅವರು ವಿವಿಧ ಕಡೆ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿರುವ ಮಾಜಿ ಸಂಸದೆ ರಮ್ಯಾ ವಿಜಯಪುರ, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ.