HomeKarnatakaBIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ವಿಚಾರ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಕಲ್ಯಾಣ ಕರ್ನಾಟಕ, ಕರಾವಳಿ, ಮಲೆನಾಡು, ಬೆಂಗಳೂರು, ಕಿತ್ತೂರು ಕರ್ನಾಟಕ ಭಾಗಗಳಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

200 ಯೂನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ., ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿ, ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್, ನಿರುದ್ಯೋಗಿ ಯುವ ಜನರಿಗೆ ನಿರುದ್ಯೋಗ ಭತ್ಯೆ ಘೋಷಣೆಗಳು ಪ್ರಣಾಳಿಕೆಯಲ್ಲಿ ಇರುತ್ತವೆ. ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ ಮಾಡುವ ವಿಚಾರವೂ ಕಾಂಗ್ರೆಸ್ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular