HomeKarnatakaBIG NEWS: ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ ಏಜೆಂಟ್; ನಾನು ಕ್ಷಮೆ ಕೇಳುವ ಪ್ರಶ್ನೆ ಇಲ್ಲ...

BIG NEWS: ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ ಏಜೆಂಟ್; ನಾನು ಕ್ಷಮೆ ಕೇಳುವ ಪ್ರಶ್ನೆ ಇಲ್ಲ ಎಂದ ಯತ್ನಾಳ್

ಹುಬ್ಬಳ್ಳಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದಿರುವ ತಮ್ಮ ಹೇಳಿಕೆಯನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಮರ್ಥಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಯತ್ನಾಳ್, ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕರು ವಿಷದ ಹಾವು ಎಂದು ಕರೆದಿದ್ದಕ್ಕೆ ನಾನು ವಿಷಕನ್ಯೆ ಎಂದು ಹೇಳಿದ್ದೇನೆ. ಈ ವಿಚಾರವಾಗಿ ನಾನು ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡ್ತೀನಿ ಹೊರತು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು 91 ಬಾರಿ ಬೈದಿದ್ದಾರೆ. ಮೋದಿಯವರನ್ನು ವಿಷಸರ್ಪ ಎಂದಿದ್ದಾರೆ. ಹಾಗಾಗಿ ನಾನು ವಿಷಕನ್ಯೆ ಎಂಬ ಹೇಳಿಕೆ ನೀಡಿದ್ದೇನೆ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular