HomeBusinessGST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: 1.87 ಲಕ್ಷ ಕೋಟಿ ರೂ. ಕಲೆಕ್ಷನ್

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: 1.87 ಲಕ್ಷ ಕೋಟಿ ರೂ. ಕಲೆಕ್ಷನ್

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ಏಪ್ರಿಲ್‌ನಲ್ಲಿ ಶೇ. 12 ರಷ್ಟು ಏರಿಕೆಯಾಗಿ 1.87 ಲಕ್ಷ ಕೋಟಿ ರೂ.ಗೆ ತಲುಪಿದೆ.

ಇದು ಮಾಸಿಕ ಅತ್ಯಧಿಕ ಸಂಗ್ರಹ ಆಗಿದೆ. ಏಪ್ರಿಲ್ 2023 ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು 1,87,035 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ 38,440 ಕೋಟಿ ರೂ., ಎಸ್‌ಜಿಎಸ್‌ಟಿ 47,412 ಕೋಟಿ ರೂ., ಐಜಿಎಸ್‌ಟಿ 89,158 ಕೋಟಿ(34,972 ರೂ. ಸೇರಿದಂತೆ 34,977 ರೂ.), ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ಕೋಟಿ) ಮತ್ತು ಸೆಸ್ 12,025 ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ.ಗಳ ಹೆಚ್ಚಿನ ಸಂಗ್ರಹವಾಗಿತ್ತು. ಏಪ್ರಿಲ್ 2023 ರ ಆದಾಯವು ಕಳೆದ ವರ್ಷ ಇದೇ ತಿಂಗಳ ಜಿಎಸ್‌ಟಿ ಆದಾಯಕ್ಕಿಂತ ಶೇಕಡ 12 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular