alex Certify ‘ಮೌಲಾನಾ ಆಜಾದ್’ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೌಲಾನಾ ಆಜಾದ್’ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಯು 09 ರಿಂದ 13 ವಯೋಮಾನದವರಾಗಿದ್ದು, 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಶಾಲಾ ಘೋಷಣಾ ಪ್ರಮಾಣ ಪತ್ರದೊಂದಿಗೆ ಆಯಾ ಶಾಲೆಯಲ್ಲಿ ಅರ್ಜಿ ಸಲ್ಲಿಸುವುದು.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಶೇ.75% ರಷ್ಟು ದಾಖಲಾತಿ, ಇತರೆ ಸಮುದಾಯದ ಮಕ್ಕಳಿಗೆ ಶೇ.25% ರಷ್ಟು ದಾಖಲಾತಿಗಾಗಿ ಹಾಗೂ ಬಾಲಕಿಯರಿಗಾಗಿ ಶೇ.50% ಸ್ಥಾನಗಳನ್ನು ಮೀಸಲಿರಿಸಲಾಗಿದ್ದು, ನುರಿತ ಅನುಭವಿ ಶಿಕ್ಷಕರಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೋಟ್ ಪುಸ್ತಕ ಲೇಖನ ಸಾಮಗ್ರಿಗಳು, ಶಾಲಾ ಬ್ಯಾಗ್, ಎರಡು ಜೊತೆ ಉಚಿತ ಸಮವಸ್ತ್ರ, ಎರಡು ಜೊತೆ ಶೂ ಮತ್ತು ಸಾಕ್ಸ್, ಉಚಿತ ಬಿಸಿ ಊಟನ ವ್ಯವಸ್ಥೆ, ಉಚಿತ ಕಂಪ್ಯೂಟರ್ ತರಬೇತಿ, ಸ್ಮಾರ್ಟ್ ಕ್ಲಾಸ್, ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಸೌಲಭ್ಯ, ಸುಸಜ್ಜಿತ ಪ್ರಯೋಗಾಲಯ ಮತ್ತು ಗ್ರಂಥಾಲಯ, ವಿದ್ಯಾರ್ಥಿಗಳ ದೈಹಿಕ ವಿಕಾಸಕ್ಕಾಗಿ ಕ್ರೀಡಾ ಚಟುವಟಿಕೆ ಇತ್ಯಾದಿ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು.

ಮೌಲಾನಾ ಅಜಾದ್ ಮಾದರಿ ಶಾಲೆ ಲಷ್ಕರ್ ಮೊಹಲ್ಲಾ, ಶಿವಮೊಗ್ಗ-7676621339, ಮೌಲಾನಾ ಅಜಾದ್ ಮಾದರಿಶಾಲೆ ಬಸವೇಶ್ವರ ಸರ್ಕಲ್ ಓಲ್ಡ್ ಟೌನ್, ಭದ್ರಾವತಿ-9844081633, ಮೌಲಾನಾ ಅಜಾದ್ ಮಾದರಿ ಶಾಲೆ ಗುರುಭವನ್ ಹತ್ತಿರ, ಶಿಕಾರಿಪುರ-9886657635, ಮೌಲಾನಾ ಅಜಾದ್ ಮಾದರಿ ಶಾಲೆ ಮಟದಗದ್ದೆ, ಶಿರಾಳಕೊಪ್ಪ-9986254703, ಮೌಲಾನಾ ಅಜಾದ್ ಮಾದರಿ ಶಾಲೆ ಪ್ರೈವೇಟ್ ಬಸ್ ಸ್ಟಾಂಡ್ ಹತ್ತಿರ, ಸೊರಬ- 9743031530, ಮೌಲಾನಾ ಅಜಾದ್ ಮಾದರಿ ಶಾಲೆ ಗಾಂಧಿನಗರ, ಸಾಗರ-9449946429. ಈ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ದಿ: 15/05/2023ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಉಚಿತವಾಗಿ ಅರ್ಜಿ ಪಡೆಯಲು ಹಾಗೂ ಮಾಹಿತಿಗಾಗಿ ಜಿಲ್ಲಾ ಮಾಹಿತಿ ಕೇಂದ್ರ 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ಶಿವಮೊಗ್ಗ-7676888388, ತಾಲ್ಲೂಕು ಮಾಹಿತಿ ಕೇಂದ್ರ ಇಂದಿರಾ ನಗರ, ಸೇಂಟ್ ಮೇರೀಸ್ ಸ್ಕೂಲ್ ಹತ್ತಿರ ತೀರ್ಥಹಳ್ಳಿ-8861982835, ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಪಂಚಾಯತ್ ಹತ್ತಿರ ಭದ್ರಾವತಿ-9538853680, ತಾಲ್ಲೂಕು ಮಾಹಿತಿ ಕೇಂದ್ರ ದೇವರಾಜ್ ಅರಸ್ ಭವನ್ ಮರುರ್ ರಸ್ತೆ ಸೊರಬ-9513815513, ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಪಂಚಾಯತ್ 2ನೇ ಮಹಡಿ ಶಿಕಾರಿಪುರ- 7829136724, ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಕಛೇರಿ ಹಳೆ ಡಿ.ಸಿ ಕಛೇರಿ ಹೊಸನಗರ-9008447029, ತಾಲ್ಲೂಕು ಮಾಹಿತಿ ಕೇಂದ್ರ ಇಂದಿರಾ ನಗರ ಹತ್ತಿರ ಎಸ್.ಎನ್ ನಗರ ಸಾಗರ-7338222907  ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ. 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ದೂರವಾಣಿ:(08182) 220206, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಶಿವಮೊಗ್ಗ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಸಾಗರ 7795315517/7760822213 / 9900132234 ಸಂಪರ್ಕಿಸುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...