HomeKarnatakaBIG NEWS: ಖರ್ಗೆ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

BIG NEWS: ಖರ್ಗೆ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಅಹಂಕಾರ ತುಂಬಿ ತುಳುಕುತ್ತಿದೆ. ಅಶ್ಲೀಲ ಪದಗಳ ಮೂಲಕ ನಿಂದಿಸುತ್ತಾ ಕರ್ನಾಟಕದ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನ್ನನ್ನು ವಿಷ ಸರ್ಪ ಎಂದು ಹೇಳಿದ್ದಾರೆ. ಅವರ ಪುತ್ರ ಕೂಡ ನನಗೆ ನಾಲಾಯಕ್ ಎಂದು ನಿಂದಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ನಿಂದನೆಗಳಿಗೆ ನಾನು ಉತ್ತರ ಕೊಡಲ್ಲ ಕರ್ನಾಟಕದ ಜನತೆ ಉತ್ತರ ಕೊಡಲಿದ್ದಾರೆ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಾಯಕರು ದೆಹಲಿಯಲ್ಲಿರುವ ಹೈಕಮಾಂಡ್ ಮೆಚ್ಚಿಸಲು ನನ್ನನ್ನು ನಿಂದಿಸುತ್ತಿದ್ದಾರೆ. ಕೆಟ್ಟ ಪದ ಪ್ರಯೋಗಗಳ ಮೂಲಕ ದೊಡ್ಡ ಪರಂಪರೆ ಹೊಂದಿರುವ ಕರ್ನಾಟಕಕ್ಕೆ ಅಗೌರವ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular