ಶಿವಮೊಗ್ಗ: ಮೇ 3ರಂದು ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 3 ರಂದು ಪ್ರಧಾನಿ ನರೇಂದ್ರ ಮೋದಿ ಅಂಕೋಲಾದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗ ವತಿಯಿಂದ 75 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ.
ಹೀಗಾಗಿ ಮೇ 3ರಂದು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ವಿಭಾಗಿಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.