HomeKarnatakaರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಂದು ಬಿಜೆಪಿ ಪರ ಸುದೀಪ್ ಭರ್ಜರಿ ಪ್ರಚಾರ

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಂದು ಬಿಜೆಪಿ ಪರ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ನಟ ಸುದೀಪ್ ಪ್ರಚಾರ ನಡೆಸಲಿದ್ದಾರೆ. ಎರಡು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಸುದೀಪ್ ರೋಡ್ ಶೋ ನಡೆಸಲಿದ್ದಾರೆ.

ಬೆಳಗ್ಗೆ 9.30 ಕ್ಕೆ ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ರೋಡ್ ಶೋ ನಡೆಸಲಿರುವ ಅವರು 11.30ಕ್ಕೆ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2:40ಕ್ಕೆ ಶಹಾಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಸುದೀಪ್ ನಂತರ ಸಂಜೆ 4:30ಕ್ಕೆ ಯಾದಗಿರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಬೀಳಗಿ, ಗುಳೇದಗುಡ್ಡ ಹಾಗೂ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ ಸುದೀಪ್ ಬೆಂಬಲಿಸುವಂತೆ ಮನವಿ ಮಾಡಿದರು. ಅವರನ್ನು ನೋಡಲು ಭಾರೀ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular