ಅಮಿತ್ ಶಾ ಭಾಷಣ ಮಾಡುವಾಗಲೇ ಅರ್ಧಕ್ಕೆ ಎದ್ದು ಹೋದ BSY…! ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ನಡೆದ ಘಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕಿಳಿದಿರುವ ಕನಕಪುರ ಕ್ಷೇತ್ರದತ್ತ ಹೆಚ್ಚಿನ ಚಿತ್ತ ನೆಟ್ಟಿದ್ದಾರೆ.

ಈ ಇಬ್ಬರು ನಾಯಕರನ್ನು ಮಣಿಸಲೇಬೇಕೆಂಬ ಕಾರಣಕ್ಕೆ ಬಿಜೆಪಿಯಿಂದ ಸಿದ್ದರಾಮಯ್ಯ ಎದುರು ಸಚಿವ ವಿ. ಸೋಮಣ್ಣ ಹಾಗೂ ಡಿ.ಕೆ. ಶಿವಕುಮಾರ್ ಎದುರು ಸಚಿವ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಲಾಗಿದ್ದು, ಘಟಾನುಘಟಿ ನಾಯಕರುಗಳು ಪ್ರಚಾರ ಕಾರ್ಯ ನಡೆಸಿದ್ದಾರೆ. ಮಂಗಳವಾರದಂದು ಸಹ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ವರುಣಾದ ಹೊಸಕೋಟೆಯಲ್ಲಿ ಬಹಿರಂಗ ಸಮಾವೇಶ ನಡೆದಿದ್ದು, ಅಮಿತ್ ಶಾ ಮಾತನಾಡುವಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ಇಳಿದು ಹೊರ ನಡೆದಿರುವ ಘಟನೆ ನಡೆದಿದೆ. ಸೋಮಣ್ಣ ಹಾಗೂ ಯಡಿಯೂರಪ್ಪ ನಡುವೆ ಶೀತಲ ಸಮರ ನಡೆಯುತ್ತಿದೆ ಎನ್ನುವ ವದಂತಿಗಳ ನಡುವೆ ಈ ಬೆಳವಣಿಗೆ ನಡೆದಿದೆ. ಅಷ್ಟೇ ಅಲ್ಲ, ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯನವರ ಹೆಸರನ್ನು ಪ್ರಸ್ತಾಪಿಸದೆ ಇರುವುದು ಸಹ ಕುತೂಹಲಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read