HomeKarnatakaಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ: ಡಿ.ಕೆ. ಶಿವಕುಮಾರ್ ಪಾರಾದ ಬಗ್ಗೆ ಖ್ಯಾತ ಜ್ಯೋತಿಷಿ ಮಹತ್ವದ ಮಾಹಿತಿ

ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ: ಡಿ.ಕೆ. ಶಿವಕುಮಾರ್ ಪಾರಾದ ಬಗ್ಗೆ ಖ್ಯಾತ ಜ್ಯೋತಿಷಿ ಮಹತ್ವದ ಮಾಹಿತಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಡಿ.ಕೆ. ಶಿವಕುಮಾರ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರು, ಡಿ.ಕೆ. ಶಿವಕುಮಾರ್ ಪತ್ನಿಯ ಗ್ರಹ ಗತಿ ಚೆನ್ನಾಗಿರುವುದರಿಂದ ಡಿಕೆಶಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯ ಗುರುಬಲ, ಶನಿ ಬಲ ಎರಡೂ ಇಲ್ಲ. ಆದರೆ, ಅವರ ಪತ್ನಿ ಉಷಾ ಅವರ ಗ್ರಹ ಗತಿ ಚೆನ್ನಾಗಿದ್ದು, ಆ ದೈವ ಬಲ ಶಿವಕುಮಾರ್ ಅವರನ್ನು ಕಾಪಾಡುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಲಿಕಾಪ್ಟರ್ ಗೆ ಕುಕ್ಕಿದ ರಣ ಹದ್ದು ಮೃತಪಟ್ಟಿದೆ. ಹೀಗಾಗಿ ಪಂಚ ಪಕ್ಷಿ ಶಾಸ್ತ್ರ ಪರಿಣಿತ ಗಜೇಂದ್ರ ಅವರೊಂದಿಗೆ ಚರ್ಚೆ ನಡೆಸಿದ್ದು, ಶಾಸ್ತ್ರದ ಅನುಸಾರ ದೋಷ ಪರಿಹಾರಕ್ಕೆ ಬೆಂಗಳೂರಿನ ಅಲಸೂರಿನಲ್ಲಿರುವ ಸಾವಿರ ವರ್ಷ ಹಳೆಯ ಸೋಮೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಿಸಬೇಕು. ಕುಕ್ಕೆ ಸುಬ್ರಹ್ಮಣ್ಯಕ್ಕೆ 22 ದಿನಗಳ ಒಳಗೆ ಭೇಟಿ ನೀಡಬೇಕು. ಘಟನೆಯನ್ನು ಹಗುರವಾಗಿ ಪರಿಗಣಿಸದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಡಿಕೆಶಿ ಮುನ್ನಡೆಯಬೇಕು ಎಂದು ರಾಜಗುರು ದ್ವಾರಕನಾಥ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular