HomeLatest Newsವೇಶ್ಯೆಯರೊಂದಿಗೆ ಲೈಂಗಿಕ ಸಂಬಂಧ ಆರೋಪ: ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧಿಸುವಂತೆ ಸುಪ್ರೀಂ ಕೋರ್ಟ್ ಮೊರೆ...

ವೇಶ್ಯೆಯರೊಂದಿಗೆ ಲೈಂಗಿಕ ಸಂಬಂಧ ಆರೋಪ: ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ಪತ್ನಿ ಹಸಿನ್ ಜಹಾನ್

ನವದೆಹಲಿ: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್‌ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್‌ಗೆ ತಡೆ ನೀಡಿತ್ತು. ಸೆಷನ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ನಲ್ಲಿ ವಜಾಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ತಮ್ಮ ವಕೀಲರ ಮೂಲಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ, ಶಮಿ ತನ್ನಿಂದ ವರದಕ್ಷಿಣೆಗೆ ಬೇಡಿಕೆಯಿಡುತ್ತಿದ್ದ. ವೇಶ್ಯೆಯರೊಂದಿಗೆ ಅಕ್ರಮ ವಿವಾಹೇತರ ಲೈಂಗಿಕ ಸಂಬಂಧಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಆಗಸ್ಟ್ 29, 2019 ರಂದು ಅಲಿಪುರದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರು ಶಮಿ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ.

ಮೊಹಮ್ಮದ್ ಶಮಿ ಈ ಆದೇಶವನ್ನು ಸೆಷನ್ಸ್ ನ್ಯಾಯಾಲಯದ ಮುಂದೆ ಪ್ರಶ್ನಿಸಿದರು, ಇದು ಸೆಪ್ಟೆಂಬರ್ 9, 2019 ರಂದು ಬಂಧನ ವಾರಂಟ್ ಮತ್ತು ಕ್ರಿಮಿನಲ್ ವಿಚಾರಣೆಯ ಸಂಪೂರ್ಣ ಪ್ರಕ್ರಿಯೆಗಳಿಗೆ ತಡೆ ನೀಡಿದೆ.

ಪರಿಣಾಮವಾಗಿ, ಶಮಿ ಅವರ ಪತ್ನಿ ಕಲ್ಕತ್ತಾದ ಹೈಕೋರ್ಟ್‌ಗೆ ತೆರಳಿದರು. ಆದರೆ ಅವರ ಪರವಾಗಿ ಯಾವುದೇ ಆದೇಶ ಪಡೆಯಲು ವಿಫಲರಾದರು. ಮಾರ್ಚ್ 28 2023 ರ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular