HomeKarnatakaBIG NEWS: ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ; BSY ವಾಗ್ದಾಳಿ

BIG NEWS: ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ; BSY ವಾಗ್ದಾಳಿ

ಮೈಸೂರು: ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಜರಂಗದಳ ಬ್ಯಾನ್ ಅನ್ನೋದು ಕಾಂಗ್ರೆಸ್ ನ ತಿರುಕನ ಕನಸು. ಅಧಿಕಾರಕ್ಕೆ ಬಾರದವರು ಏನುಬೇಕಾದರೂ ಭರವಸೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಬಜರಂಗದಳ ನಿಷೇಧವಾಗಲ್ಲ. ಕಾಂಗ್ರೆಸ್ ಪ್ರಣಾಳಿಕೆಗೆ ಕವಡೆಕಾಸಿನ ಕಿಮ್ಮತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular