HomeKarnatakaBIG NEWS: ಬಜರಂಗದಳ ಬ್ಯಾನ್ ವಿಚಾರ; ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡ್ತಾರೆ ಎಂದ ಖರ್ಗೆ

BIG NEWS: ಬಜರಂಗದಳ ಬ್ಯಾನ್ ವಿಚಾರ; ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡ್ತಾರೆ ಎಂದ ಖರ್ಗೆ

ಕಲಬುರ್ಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ನಿಷೇಧ ವಿಚಾರವಾಗಿ ಪ್ರಣಾಳಿಕೆ ಅಧ್ಯಕ್ಷರು ಮಾತನಾಡುತ್ತಾರೆ. ನಾನು ಪದೇ ಪದೇ ಹೆಚ್ಚು ಮಾತನಾಡಲು ಹೋಗಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೆ ವೇಳೆ ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟ್ಟ ಖರ್ಗೆ, ರಾತ್ರಿ ಮಟನ್ ತಿಂದು ಹಗಲಲ್ಲಿ ನಾನ್ ವೆಜ್ ಅಂತಾ ಬೈತಾರೆ. ಬಿಜೆಪಿ ಜನರ ಭಾವನಾತ್ಮಕ ವಿಚಾರದ ಮೇಲೆ ಆಟವಾಡುತ್ತಿದೆ. ಜಗಳ ಹಚ್ಚಿ ವೋಟ್ ಪಡೆಯುವುದು ಸರಿಯಲ್ಲ. ಇಂತಹ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular