HomeKarnatakaBIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ

BIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ವಾರ ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರ ಮತ ಬೇಟೆ ಜೋರಾಗಿ ಸಾಗಿದೆ.

ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದು ನನ್ನ ಕೊನೇ ಚುನಾವಣೆ ಎಂದು ಘೋಷಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿರುವ ಜಗದೀಶ್ ಶೆಟ್ಟರ್, ಇದು ನನ್ನ ಕೊನೇ ಚುನಾವಣೆ. ನಾನು 7ನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಅಗತ್ಯವಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular