ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ‘ವಿಷಕನ್ಯೆ’ ಪದ ಬಳಕೆ ಹಿನ್ನೆಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ.
ಮೇ 4ರಂದು ಸಂಜೆ 5 ಗಂಟೆಯೊಳಗೆ ನೋಟಿಸ್ ಗೆ ಉತ್ತರ ನೀಡಲು ಸೂಚನೆ ನೀಡಲಾಗಿದೆ. ರಾಜಕೀಯ ವಿರೋಧಿ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ ಎಂದು ಹೇಳಲಾಗಿದೆ.
ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ. ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿ ನೀಡಿದ ನೋಟಿಸ್ ನಲ್ಲಿ ಅವರು ಮಾದರಿ ಕೋಡ್‌ನ ನಿಬಂಧನೆಗಳನ್ನು ಪ್ರಾಥಮಿಕವಾಗಿ ಉಲ್ಲಂಘಿಸಿದ್ದಾರೆ ಎಂದು ತಿಳಿಸಲಾಗಿದೆ. ಗುರುವಾರ ಸಂಜೆಯೊಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಬಿಜೆಪಿಯ ಸ್ಟಾರ್ ಪ್ರಚಾರಕ ಯತ್ನಾಳ್ ಗೆ ಸೂಚಿಸಲಾಗಿದೆ.