ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ.
ಮೇ 6 ರಂದು ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್ ಪರವಾಗಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಇದೇ ಮೇ 6 ರಂದು ಪ್ರಚಾರ ಕೈಗೊಂಡಿದ್ದಾರೆ.