ಮಾಗಡಿ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಅವರ ಭವಿಷ್ಯಗಳು ನಿಖರವಾಗಿರುತ್ತವೆ ಎಂಬ ನಂಬಿಕೆ ಇದೆ. ರಾಜ್ಯದಲ್ಲಿ ಪ್ರಸ್ತುತ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕೋಡಿಮಠ ಶ್ರೀಗಳು ಈ ಕುರಿತಾಗಿ ಭವಿಷ್ಯ ವಾಣಿ ನುಡಿದಿದ್ದಾರೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಈ ಬಾರಿ ಬರುವುದಿಲ್ಲ. ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ ಎಂದು ಶ್ರೀಗಳು ಹೇಳಿದ್ದು, ಅವರ ಹೇಳಿಕೆ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಕುತೂಹಲ ಮೂಡಿಸಿದೆ.