HomeKarnatakaBREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ ಹಿನ್ನೆಲೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಹಣ ಕೊಡುವುದಾಗಿ ಹೇಳಿ ಇವರು ವೋಟರ್ ಐಡಿ ಸಂಗ್ರಹಿಸಿದ್ದರು. ಒಂದು ವೋಟಿಗೆ ಎರಡು ಸಾವಿರ ರೂಪಾಯಿ ನೀಡುವುದಾಗಿ ಹೇಳಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನು ವಶಕ್ಕೆ ಕರೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಪತ್ತೆಯಾಗಿವೆ. ಭಾರತಿನಗರ ಪೊಲೀಸ್ ಠಾಣೆಗೆ ಫ್ಲೈಯಿಂಗ್ ಸ್ಕ್ವಾಡ್ ದೂರು ನೀಡಿದೆ. ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular