ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ.
ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ಬಂದ್ ಆಗಲಿದ್ದು, ಮೇ 8ರ ಬೆಳಿಗ್ಗೆ 6 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಲಿದ್ದು, ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಇದು ಮುಂದುವರಿಯಲಿದೆ.
ಇನ್ನು ಮತ್ತು ಎಣಿಕೆ ದಿನವಾದ ಮೇ 13 ರಂದು ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ಬಂದ್ ಇರಲಿದ್ದು, ಒಂದು ವೇಳೆ ಮರು ಮತದಾನ ನಡೆದ ಸಂದರ್ಭದಲ್ಲಿ ಅಲ್ಲಿಗೂ ಸಹ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.