HomeKarnatakaಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ ನಡೆದಿದೆ.

27 ವರ್ಷದ ಸುಹೇಲ್ ಹಾಗೂ 21 ವರ್ಷದ ಸೈಯದ್ ಮೃತ ಸಹೋದರರು. ಮೃತರು ಸಾಗರದ ರಾಮನಗರ ಬಡಾವಣೆ ನಿವಾಸಿಗಳಾಗಿದ್ದಾರೆ.

ಉಳವಿ ಗ್ರಾಮಕ್ಕೆ ಬೈಕ್ ನಲ್ಲಿ ಮದುವೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular