ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚಿತ್ರರಂಗದ ದಂಡೇ ಆಗಮಿಸಲಿದೆ.
ಸಿದ್ಧರಾಮಯ್ಯ ಪರವಾಗಿ ಹಲವು ನಟರು, ನಟಿಯರು ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಪ್ರಚಾರ ಕೈಗೊಂಡಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ವರುಣಾದಲ್ಲಿ ಇಂದು ಕಾಂಗ್ರೆಸ್ ಪರ ಮತ ಯಾಚಿಸಲಿದ್ದಾರೆ.
ಅಲ್ಲದೇ ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲ, ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ಅವರು ಸಿದ್ದರಾಮಯ್ಯ ಪರವಾಗಿ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.