ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಇದರೊಂದಿಗೆ ಬಂದಿದರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಪುತ್ತೂರು ತಾಲೂಕಿನ ಕಾಡುಮರೀಲ್ ಮನೆ ನಿವಾಸಿ ಮಹಮ್ಮದ್ ಫಾರಿಶ್(19) ಅನ್ಯಧರ್ಮದ ಯುವತಿಯೊಂದಿಗೆ ಇದ್ದಾಗ ಗುಂಪೊಂದು ಹಲ್ಲೆ ನಡೆಸಿದ್ದು, ಫಾರಿಶ್ ಮೈಮೇಲೆ ಬಾಸುಂಡೆಗಳು ಮೂಡಿದ್ದವು.

ಹಲ್ಲೆ ನಡೆಸಿದ್ದ ಪ್ರದೀಪ್ ಎಂಬುವನನ್ನು ಪೊಲೀಸರು ಬಂಧಿಸಿದ್ದರು. ನಂತರದಲ್ಲಿ ಉಳಿದ ಆರೋಪಿಗಳಾದ ದಿನೇಶ್ ಗೌಡ, ನಿಶಾಂತ್ ಕುಮಾರ್ ಮತ್ತು  ಪ್ರಜ್ವಲ್  ಎಂಬುವರನ್ನು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read